ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೊಡ್ಡಬಳ್ಳಾಪುರ ಕೈಗಾರಿಕೆಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದೊಡ್ಡಬಳ್ಳಾಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ:27-02-2026 ರAದು ಬೆಳಿಗ್ಗೆ 9.00 ರಿಂದ ಸಂಜೆ 5.00 ರವರೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾದಗೊಂಡನಹಳ್ಳಿ ರಸ್ತೆ, ದೊಡ್ಡಬಳ್ಳಾಪುರ ಇಲ್ಲಿ “ಉದ್ಯೋಗಮೇಳ”ವನ್ನು ಆಯೋಜಿಲಾಗುತ್ತಿದ್ದು, ಸದರಿ ಉದ್ಯೋಗಮೇಳದಲ್ಲಿ ಅಂದಾಜು 75ಕ್ಕಿಂತ ಹೆಚ್ಚು ನಿಯೋಜಕರು/ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ 3000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. 10ನೇ ತರಗತಿಗಿಂತ ಕಡಿಮೆ, 10ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿAಗ್, ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ.
- ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು ಈ QR code ಅಥವಾ https://bangalorerural.nic.in ನಲ್ಲಿರುವ ಲಿಂಕ್‌ಅನ್ನು ಬಳಸಿಕೊಂಡು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿರುತ್ತದೆ. ಆನ್‌ಲೈನ್ ನೋಂದಣಿ ಲಿಂಕ್ : ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
- ಉದ್ಯೋಗಮೇಳದ ದಿನ ಸ್ಥಾಪಿಸಲಾಗುವ “ಅಭ್ಯರ್ಥಿಗಳು ಅಭ್ಯರ್ಥಿಗಳ ನೋಂದಣಿ ಕೌಂಟರ್”ಗಳಲ್ಲಿಯೂ ಕೂಡ ತಮ್ಮ ಹೆಸರನ್ನು ನೋಂದಾಯಿಸಿಕೊAಡು ಭಾಗವಹಿಸಬಹುದಾಗಿರುತ್ತದೆ
- ಅಭ್ಯರ್ಥಿಗಳು ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿಯೂ ನೋಂದಾಯಿಸಿಕೊಳ್ಳಬಹುದಾಗಿರುತ್ತದೆ
- ಅಭ್ಯರ್ಥಿಗಳು ಕನಿಷ್ಟ 5 ಬಯೋಡಾಟ(ಸ್ವ-ವಿವರ) ಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಈ ಮೂಲಕ ತಿಳಿಸಲಾಗಿದೆ.
- ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ.
