Close

ಯುವನಿಧಿ ಯೋಜನೆ

 

ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಫಲಾನುಭವಿಗಳ ನೋಂದಾಣಿಗೆ ಸನ್ಮಾನ್ಯ ಮುಖ್ಯಮಂತ್ರಿಗಳು ದಿನಾಂಕ:26-12-2023ರಂದು ಚಾಲನೆ ನೀಡಿದ್ದು,  ನೋಂದಾಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ  ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ ) ಪ್ರತಿ ತಿಂಗಳು ರೂ.3,000-00 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500-00 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ. ಸದರಿ ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭವಿಗಳ ಬ್ಯಾಮಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಪದವಿ/ಡಿಪ್ಲೋಮ ನಂತರ  ಉನ್ನತ  ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಬ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ  ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.

ಆಸಕ್ತ ಅಭ್ಯರ್ಥಿಗಳು www.sevasindhugs.karnataka.gov.in ನಲ್ಲಿ ನೋಂದಾಯಿಸಲು ಈ ಮೂಲಕ ತಿಳಿಸಲಾಗಿದೆ. ಪದವಿ/ಡಿಪ್ಲೋಮಾ ತೇರ್ಗಡೆಹೊಂದಿ 180 ದಿನಗಳೊಳಗೆ ಇರುವ  ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಈ ಅಭ್ಯರ್ಥಿಗಳು 180ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ. ಯೋಜನೆಯ  ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳ 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್ ಲೈನ್ ನಲ್ಲಿ ಈ ಮೇಲೆ ತಿಳಿಸಲಾದ ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ:1800-599-9918 ಇಂದ ಪಡೆಯಲು ತಿಳಿಸಲಾಗಿದೆ.

ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆಯನ್ನು ಪಡೆಯಲು ಅರ್ಜಿ ಸಲ್ಲಿಸಿ, ದಾಖಲಾತಿಗಳ ಪರಿಶೀಲನೆಗಾಗಿ ಬಾಕಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಅಥವಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿಗಳಿಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಬೇಟಿ ನೀಡಿ ಪರಿಶೀಲಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿದೆ. ಅರ್ಜಿದಾರರ  ಅರ್ಜಿಗಳು ಪರಿಶೀಲನೆಗೆ ಬಾಕಿ ಇರುವ ಸ್ಥಿತಿಯನ್ನು ಸೇವಾ ಸಿಂಧೂ ಅಂತರ್ಜಾಲ ತಾಣದಿಂದ ಪಡೆಯಬಹುದಾಗಿರುತ್ತದೆ.

 

   ಯುವನಿಧಿ ಪ್ರಗತಿ ವರದಿ ವಿವರ.

          “ಯುವನಿಧಿ” ಯೋಜನೆಯು ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ 422, ದೊಡ್ಡಬಳ್ಳಾಪುರದಲ್ಲಿ 594, ಹೊಸಕೋಟೆದಲ್ಲಿ 505, ಮತ್ತು ನೆಲಮಂಗಲದಲ್ಲಿ 615 ನಿರುದ್ಯೋಗಿಗಳು ನೋಂದಣಿ ಮಾಡಿಕೊಂಡಿರುತ್ತಾರೆ. ಒಟ್ಟಾರೆ ಜೂನ್-2024ರ ವರೆಗೆ 2136 ನಿರುದ್ಯೋಗಿಗಳು ನೋಂದಣಿ ಮಾಡಿಕೊಂಡಿರುತ್ತಾರೆ.

          ಯುವನಿಧಿ ಯೋಜನೆಯಲ್ಲಿ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 3,000-00 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1500=00ನಿರುದ್ಯೋಗ ಭತ್ಯೆಯನ್ನು ನೀಡುತ್ತಿದ್ದು, ಡಿಸೆಂಬರ್-2023ರ ಮಾಹೆಯಲ್ಲಿ 53 ಅಭ್ಯರ್ಥಿಗಳು,      ಜನವರಿ-2024ರ ಮಾಹೆಯಲ್ಲಿ 337 ಅಭ್ಯರ್ಥಿಗಳು, ಫೆಬ್ರವರಿ-2024ರ ಮಾಹೆಯಲ್ಲಿ 347 ಅಭ್ಯರ್ಥಿಗಳು, ಮಾರ್ಚ್-2024ರ ಮಾಹೆಯಲ್ಲಿ 132 ಅಭ್ಯರ್ಥಿಗಳು ಯುವನಿಧಿಯ ಸೌಲಭ್ಯವನ್ನು ಪಡೆದುಕೊಂಡಿರುತ್ತಾರೆ.

2024-25ನೇ ಸಾಲಿನ ಯುವನಿಧಿ ಯೋಜನೆಯ ಪ್ರಗತಿ ವಿವರ.

Sl.No

Name of the Taluk

No.Registrations as on 3-07-2024

DBTF Statistics

Dec-23

Jan-24

Feb-24

Mar-24

Apr-24

1.

Devanahalli

422

10

80

78

24

2.

Doddaballapur

594

12

97

90

40

3.

Hosakote

505

18

76

85

33

4.

Nelamangala

615

13

84

94

35

Total

2136

53

337

347

135

912