Close

“ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳ”

“ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳ”
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
“ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳ”
 ಕರ್ನಾಟಕ ಸರ್ಕಾರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ(ನಿ), ಬೆಂಗಳೂರು ವತಿಯಿಂದ “ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳ”ವನ್ನು ದಿನಾಂಕ: 26/02/2024ರಿಂದ ದಿನಾಂಕ: 27/02/2024ರ ವರೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ.

    ಈ ಉದ್ಯೋಗ ಮೇಳದಲ್ಲಿ 500ಕ್ಕಿಂತ ಹೆಚ್ಚು ಖಾಸಗಿ ಉದ್ಯೋಗದಾತರು(ಕಂಪನಿಗಳು) ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲ್ಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತರ ಪದವಿ, ಇಂಜಿನಿಯರಿAಗ್ ಹಾಗೂ ಇತರೆ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸಲಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿವರಗಳನ್ನು  https://skillconnect.kaushalkar.com ನಲ್ಲಿ ನೋಂದಾಯಿಸಿಕೊಳ್ಳಲು ಈ ಮೂಲಕ ತಿಳಿಸಲಾಗಿದೆ.
ಅಭ್ಯರ್ಥಿಗಳು ಬಯೋಡಾಟ ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ತಿಳಿಸಲಾಗಿದೆ.

Udyoga Mela – Candidates Registration Demo Video:- https://youtu.be/5aH-rl-1ipI?si=HgEP_oypq-y0PA23

 

 
19/02/2024 29/02/2024 ನೋಟ (426 KB)